ಒಡೆಯನಪುರ, ಆ. 28: ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾಕಾರಂಜಿ ಕಾರ್ಯಕ್ರಮ ಪೂರಕ ವೇದಿಕೆಯಾಗು ತ್ತದೆ’ ಎಂದು ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ಅಭಿಪ್ರಾಯ ಪಟ್ಟರು. ಅವರು ಸಮೀಪದ ಹಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯುತ್ತಿರುವ ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಒಡೆಯನಪುರ, ಆ. 28: ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾಕಾರಂಜಿ ಕಾರ್ಯಕ್ರಮ ಪೂರಕ ವೇದಿಕೆಯಾಗು ತ್ತದೆ’ ಎಂದು ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ಅಭಿಪ್ರಾಯ ಪಟ್ಟರು. ಅವರು ಸಮೀಪದ ಹಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯುತ್ತಿರುವ ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಸರಕಾರಿ ಶಾಲೆಗಳಲ್ಲಿ ಹಾಜರಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಶ್ರಮಿಸುತ್ತಿದ್ದು ಸಾಂಸ್ಕøತಿಕ ಪ್ರತಿಭೆಯನ್ನು ಸಲುವಾಗಿ ಸರಕಾರಿ ಶಾಲೆಗಳ ಉಸ್ತುವಾರಿಯಲ್ಲೆ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಪ್ರತಿವರ್ಷವು ಕ್ಲಸ್ಟರ್, ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಈ ದಿಸೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೋಷಕರು, ಗ್ರಾಮಸ್ಥರು, ದಾನಿಗಳು ಸಹಕಾರ ನೀಡುತ್ತಿರುವ ಕಾರ್ಯ ಶ್ಲಾಘನಿಯ ಎಂದರು.
ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಎಚ್.ಎಸ್. ಸಂದೀಪ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ-ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಬೇಕು ಅದೆ ರೀತಿಯಲ್ಲಿ ಮಕ್ಕಳು ತನ್ನಲ್ಲಿರುವ ಪ್ರತಿಭೆಗಳನ್ನು ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳಲ್ಲಿ ಯಾವದೆ ಅಳುಕಿಲ್ಲದೆ ಭಾಗವಹಿಸುವ ಮೂಲಕ ವೇದಿಕೆಯಲ್ಲಿ ಪ್ರತಿಭೆಯನ್ನು ಪ್ರದರ್ಶಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹಂಡ್ಲಿ ಕ್ಲಸ್ಟರ್ ಸಿಆರ್‍ಪಿ ಜೆ.ಡಿ. ಸುರೇಶ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಲೋಕೇಶ್ ಪ್ರಮುಖರಾದ ಕೆ.ವಿ.ಮಂಜುನಾಥ್, ಕೆ.ಎಂ. ವಿನೂತ್‍ಶಂಕರ್, ಎ.ಕೆ. ರಾಜಶೇಖರ್, ಶಾಲಾ ಮುಖ್ಯ ಶಿಕ್ಷಕಿ ಹೆಚ್.ಕೆ. ಸುಶೀಲ ಮುಂತಾದವರು ಉಪಸ್ಥಿತರಿದ್ದರು.
- ವಿ.ಸಿ. ಸುರೇಶ್ ಒಡೆಯನಪುರ