ಹೆಬ್ಬಾಲೆ, ಆ. 28: ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಪರಿಸರವನ್ನು ನಾಳಿನ ಜನಾಂಗಕ್ಕೆ ಉಳಿಸುವ ದಿಸೆಯಲ್ಲಿ ನಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚು ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದು ಜಿಲ್ಲಾ ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎ. ಸೀಮಾ ಹೇಳಿದರು.

ಸಾಮಾಜಿಕ ಅರಣ್ಯ ವಿಭಾಗದ ಸೋಮವಾರಪೇಟೆ ವಲಯ, ರಾಷ್ಟ್ರೀಯ ಹಸಿರು ಪಡೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಹೆಬ್ಬಾಲೆ ಸಂಯುಕ್ತ ಕಾಲೇಜಿನ ಇಕೋ ಕ್ಲಬ್ ಆಶ್ರಯದಲ್ಲಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಪರಿಸರ ಪ್ರಜ್ಞೆ ಬೆಳೆಸಿಕೊಂಡು ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದರು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಭವಿಷ್ಯತ್ತಿಗಾಗಿ ಪರಿಸರ ಸಂರಕ್ಷಿಸಬೇಕಿದೆ ಎಂದರು. ಬೆಂಗಳೂರಿನ ಉದ್ಯಮಿ ಆರ್.ಆರ್. ಕುಮಾರ್ ಮಾತನಾಡಿದರು. ಗ್ರಾ.ಪಂ. ಪಿಡಿಓ ಹೆಚ್.ಇ. ರಾಕೇಶ್, ಅರಣ್ಯ ವಲಯಾಧಿಕಾರಿ ನಮನ್ ನಾರಾಯಣ್ ನಾಯ್ಕ್ , ಆಡಳಿತ ಮಂಡಳಿಯ ಅಧ್ಯಕ್ಷ ಹೆಚ್.ಎಲ್. ರಮೇಶ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಎನ್.ಎನ್. ಧರ್ಮಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು

ಗ್ರಾ.ಪಂ. ಸದಸ್ಯ ಹೆಚ್.ಎಸ್. ಮಧುಸೂದನ್, ಹೆಬ್ಬಾಲೆ ಉಪ ವಲಯದ ಡಿಆರ್‍ಎಫ್‍ಓ ಎಂ.ಕೆ. ಭರತ್ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಹೆಚ್.ಕೆ. ನಾಗೇಂದ್ರ, ಜಿಲ್ಲಾ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ ಎಂ.ಎನ್. ವೆಂಕಟನಾಯಕ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಹೆಚ್.ಎಸ್. ಗಣೇಶ್, ಫಾರೆಸ್ಟರ್ ಫಿರೋಜ್ ಖಾನ್, ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಹೆಚ್.ಹೆಚ್. ರಾಜಶೇಖರ್, ಅಭಿಲಾಸ್ ರೆಡ್ಡಿ, ಶ್ರೀಧರ, ಹರೀಶ, ಜವರಪ್ಪ ಇತರರು ಇದ್ದರು.