ಕೂಡಿಗೆ, ಆ. 29: ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಕಸವಿಲೇವಾರಿ ಘಟಕ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೂ. 10 ಲಕ್ಷ ಬಿಡುಗಡೆಯಾಗಿದ್ದು, ಕಸವಿಲೇವಾರಿ ಘಟಕ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮತ್ತು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಭೂಮಿಪೂಜೆ ನೆರವೇರಿಸಿದರು.

ಮಂಜೂರಾಗಿರುವ ಎರಡು ಎಕರೆ ಜಾಗದಲ್ಲಿ 1 ಎಕರೆ ಜಾಗದಲ್ಲಿ ಕಸವಿಲೇವಾರಿ ಘಟಕ ಮತ್ತೊಂದು ಎಕರೆ ಜಾಗವನ್ನು ರುದ್ರಭೂಮಿಗೆ ಬಳಸಲಾಗುವದು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಾರಾನಾಥ್, ಗ್ರಾ.ಪಂ. ಸದಸ್ಯರಾದ ಜಗದೀಶ್, ಹರೀಶ್, ಶಿವಾನಂದ ಸೇರಿದಂತೆ ಸರ್ವ ಸದಸ್ಯರು ಹಾಗೂ ಗುತ್ತಿಗೆದಾರರು ಇದ್ದರು.