ಮಡಿಕೇರಿ, ಆ. 29: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಉಂಟಾಗಿರುವ ನಷ್ಟ ಪರಿಹಾರ ಕಾರ್ಯಕ್ಕಾಗಿ ನಾಳೆಯೇ ರೂ. 100 ಕೋಟಿ ಅನುದಾನ ಬಿಡುಗಡೆಗೊಳಿಸುವದಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಜಿಲ್ಲೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಕೂಡಿಗೆ ಸೈನಿಕ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪ್ರಾತ್ಯಕ್ಷಿಕೆ ಮೂಲಕ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ಮಡಿಕೇರಿ, ಆ. 29: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಉಂಟಾಗಿರುವ ನಷ್ಟ ಪರಿಹಾರ ಕಾರ್ಯಕ್ಕಾಗಿ ನಾಳೆಯೇ ರೂ. 100 ಕೋಟಿ ಅನುದಾನ ಬಿಡುಗಡೆಗೊಳಿಸುವದಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಜಿಲ್ಲೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಕೂಡಿಗೆ ಸೈನಿಕ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪ್ರಾತ್ಯಕ್ಷಿಕೆ ಮೂಲಕ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಲ್ಲಿ ರೂ. 75 ಕೋಟಿ ವಿಶೇಷ ಪ್ಯಾಕೇಜ್‍ನಲ್ಲಿ ರೂ. 100 ಕೋಟಿ ಬಿಡುಗಡೆ ಆಗಿದ್ದು, ಬಿಡುಗಡೆ ಆಗಿರುವ ಅನುದಾನದಲ್ಲಿ ಲಭ್ಯವಿರುವ ಹಣದ ಬಗ್ಗೆ ಮಾಹಿತಿ ಬಯಸಿದರು. ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ವಿಶೇಷ ಪ್ಯಾಕೇಜ್‍ನಡಿ ರೂ. 85 ಕೋಟಿ ಬಿಡುಗಡೆಯಾಗಿದ್ದು, ಇದರಲ್ಲಿ ರೂ. 75 ಕೋಟಿ ವೆಚ್ಚವಾಗಿದೆ. ರೂ. 100 ಕೋಟಿ ಇನ್ನೂ ಕೂಡ ಬಿಡುಗಡೆಯಾಗಿ ಬಂದಿಲ್ಲ. ಜಿಲ್ಲಾಧಿಕಾರಿಗಳ ವಿವೇಚನಾ ಅಭಿವೃದ್ಧಿ ಖಾತೆಯಲ್ಲಿ ರೂ. 60 ಕೋಟಿ ಹಣ ಇರುವದಾಗಿ ಮಾಹಿತಿ ನೀಡಿದರು. ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇರುವ 60 ಕೋಟಿ ಹಣವನ್ನು ಕೂಡಲೇ ಪರಿಹಾರ ಕಾರ್ಯಕ್ಕೆ ವಿನಿಯೋಗಿಸಿ; ನಾಳೆಯೇ ಹಣಕಾಸು ಇಲಾಖೆ ಮೂಲಕ ರೂ. 100 ಕೋಟಿ ಬಿಡುಗಡೆ ಮಾಡುತ್ತೇನೆ. ಈ ಮೊತ್ತವು ವೆಚ್ಚವಾದ ಬಳಿಕ ಗಮನಕ್ಕೆ ತರಬೇಕು. ಮತ್ತೆ ಹಣ ಬಿಡುಗಡೆ ಮಾಡುವದಾಗಿ ಘೋಷಿಸಿದರು. ಬಿಡುಗಡೆ ಮಾಡುವ ಹಣವನ್ನು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿರುವವರ ಸಮಸ್ಯೆಗಳಿಗೆ, ರಸ್ತೆ, ಸೇತುವೆ ಸೇರಿದಂತೆ ಇತರ ಮೂಲ ಭೂತ ಸೌಲಭ್ಯಗಳಿಗೆ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

ಜನಪ್ರತಿನಿಧಿಗಳಿಂದ ಮಾಹಿತಿ

ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ನೆರೆಯ ಸಂದರ್ಭ ಜಿಲ್ಲೆಯ ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ, ಗಿರಿಜನ ಹಾಡಿಗಳಿಗೆ ಅರಣ್ಯ ಇಲಾಖೆಯವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವದು ಸಮಂಜಸವಲ್ಲ. ಶಾಸಕರ ಮಾತನ್ನೇ ಲೆಕ್ಕಿಸದೆ ಮನಬಂದಂತೆ ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಯನ್ನು ಜಿಲ್ಲೆಯಿಂದ ವರ್ಗಾಯಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ

ತಂದರು.

(ಮೊದಲ ಪುಟದಿಂದ) ಈಗಾಗಲೇ ಜಿಲ್ಲೆಯಲ್ಲಿ ಗ್ರಾಮಾಂತರ ರಸ್ತೆಗಳು, ನಾಲ್ಕು ರಾಜ್ಯ ಹೆದ್ದಾರಿಗಳು, ಅಂತರರಾಜ್ಯ ಹೆದ್ದಾರಿ ಮಾಕುಟ್ಟ ಮತ್ತು ಕೇರಳ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿರುವ ಜೊತೆಗೆ ರಸ್ತೆಗಳು ಹಾಳಾಗಿವೆ. ಇವುಗಳ ಕಾಮಗಾರಿಗೆ ಹೆಚ್ಚು ಹಣ ಬಿಡುಗಡೆ ಹಾಗೂ ತಾತ್ಕಾಲಿಕವಾಗಿ ಐದು ಮಿನಿಬಸ್‍ಗಳು ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಕಳೆದ ಬಾರಿಯ ಭೂಕುಸಿತದಿಂದಾಗಿ ಹಾರಂಗಿ ಅಣೆಕಟ್ಟೆಯ ಹಿನ್ನೀರು ಪ್ರದೇಶದ ನದಿಗಳು, ರೈತರ ಜಮೀನಿನಲ್ಲಿ ಮರ ಹಾಗೂ ಮರಳು ತುಂಬಿಕೊಂಡು ಕೃಷಿ ಮಾಡಲಾಗದ ಪರಿಸ್ಥಿತಿ ಉಂಟಾಗಿದೆ. ಮರ - ಮರಳನ್ನು ತೆಗೆಯಲು ಭೂ ವಿಜ್ಞಾನಿ ಅಧಿಕಾರಿಗಳು ಬಿಡುತ್ತಿಲ್ಲ. ಒಂದೋ ಇಲಾಖೆಯವರು ತೆರವುಗೊಳಿಸಲಿ, ಇಲ್ಲವಾದಲ್ಲಿ ರೈತರಿಗೆ ತೆಗೆದುಕೊಳ್ಳಲು ಅವಕಾಸ ನೀಡಿದರೆ ಬದುಕು ಕಟ್ಟಿಕೊಳ್ಳಬಹುದೆಂದು ಗಮನ ಸೆಳೆದರು. ಕಾಫಿ ಸೇರಿದಂತೆ ಎಲ್ಲ ಬೆಳೆÀಗಳು ನೆಲಕಚ್ಚಿದ್ದು, ವಿಶೇಷ ಪ್ಯಾಕೇಜ್ ಘೋಷಣೆಗೆ ಕೇಂದ್ರಕ್ಕೆ ಒತ್ತಡ ಹೇರುವಂತೆ ಮನವಿ ಮಾಡಿದರು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಹಾರಂಗಿ ಜಲಾಶಯದಲ್ಲಿ ಹೆಚ್ಚು ಹೂಳು ತುಂಬಿರುವದರಿಂದ ಈಗಾಗಲೇ 131 ಕೋಟಿ ಹೂಳೆತ್ತುವ ಕಾಮಗಾರಿಗೆ ಬಿಡುಗಡೆಯಾಗಿದ್ದು, ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್‍ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರಿಯಾಯೋಜನೆಗೆ ಒತ್ತು ನೀಡಬೇಕಿದೆ. ಹೊಳೆ ದಂಡೆಯಲ್ಲಿರುವ ಮನೆಗಳ ಸ್ಥಳಾಂತರಕ್ಕೆ ಸರ್ಕಾರಿ ಜಾಗವನ್ನು ಗುರುತಿಸಿ ಅವರಿಗೆ ಬದಲಿ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಕ್ರಮಕೈಗೊಳ್ಳಬೇಕು. ಈಗಾಗಲೇ ನೆರೆ ಹಾವಳಿಯಿಂದ ಮನೆಗಳನ್ನು ಕಳೆದುಕೊಂಡಿರುವವರ ದಾಖಲಾತಿಗಳು ನಾಶವಾಗಿದ್ದು, ಮರು ನೀಡಲು ವ್ಯವಸ್ಥೆ ಮಾಡಬೇಕು. ಹೆಚ್ಚು ಮಳೆಯಿಂದಾಗಿ ಕಾಫಿ, ಒಣಮೆಣಸು, ಇನ್ನಿತರ ಬೆಳೆಗಳು ಹಾಳಾಗಿದ್ದು, ಕಾಫಿಯ ಸಾಲ ಮನ್ನಾ ಹಾಗೂ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ನೀಡಲು ವಿನಂತಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಕಳೆದ ವರ್ಷದ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಾರ್ಯ ಶೇ. 75ರಷ್ಟು ಮಾತ್ರ ಆಗಿದೆ. ಇದನ್ನು ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಸಂಪೂರ್ಣಗೊಳಿಸಿ ಸಂತ್ರಸ್ತರಿಗೆ ನೀಡಬೇಕೆಂದು ಕೋರಿದರು. ಕತ್ತಲೆಯಲ್ಲಿ ಮುಳುಗಿರುವ 120 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡುವದು, ನೆರೆ ಹಾವಳಿಯಿಂದ ಕೃಷಿ ಭೂಮಿಯಲ್ಲಿ ಮರಳು ತುಂಬಿಕೊಂಡಿದ್ದು, ಇದನ್ನು ತೆಗೆದು ಮರು ಕೃಷಿಯತ್ತ ತೊಡಗಲು ಅವಕಾಶ ಮಾಡಿಕೊಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಅರಣ್ಯ ಇಲಾಖೆಯವರಿಗೆ ಕಣ್ಣು, ಕಿವಿ ಯಾವದೂ ಇಲ್ಲವಾಗಿದೆ. ಕಾಡಾನೆ ಧಾಳಿ ಮಾಡಿದಾಗಲೂ ಅಧಿಕಾರಿಗಳು ಸಿಗಲ್ಲ; ಈ ಬಗ್ಗೆ ಸೂಕ್ತ ಕ್ರಮ ಆಗಬೇಕೆಂದು ಒತ್ತಾಯಿಸಿದರು. ಈ ಬಾರಿಗಿಂತ ನಷ್ಟವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಭೂ ಕುಸಿತ ಸಂದರ್ಭ ಉರುಳಿದ್ದ ಮರಗಳನ್ನು ಅರಣ್ಯ ಇಲಾಖೆಯವರು ಬೇಕಾಬಿಟ್ಟಿ ಕತ್ತರಿಸಿ ಕೊಂಡೊಯ್ಯುತ್ತಿದ್ದು, ಇದೀಗ ಉಳಿದ ಭಾಗಗಳು ನೀರಿನಲ್ಲಿ ಕೊಚ್ಚಿ ಬಂದು ಮುಕ್ಕೋಡ್ಲುವಿನಲ್ಲಿ ಎರಡು ಸೇತುವೆಗಳಿಗೆ ಹಾನಿಯಾಗಿದೆ ಎಂದು ಗಮನ ಸೆಳೆದರು.

ಜಿಲ್ಲೆಯ ಪ್ರಮುಖ ಬೆಳೆ ಕಾಫಿ ನೆಲಕಚ್ಚಿದೆ. ಕೇಂದ್ರ ಸರ್ಕಾರದಿಂದ ಹಿಂದಿನ ಆಡಳಿತದ ಸಂದರ್ಭದಲ್ಲಿ ಮಾಡಿದ ನೀತಿ ನಿಯಮಗಳನ್ನು ಬದಲಾವಣೆ ಮಾಡಿ ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ಎಲ್ಲ ರೀತಿಯ ಮುಕ್ತ ಅವಕಾಶಗಳನ್ನು ನೀಡಬೇಕು. ಬೆಲೆಯಲ್ಲಿಯೂ ಹೊಸ ಸುಧಾರಣೆ ತರಬೇಕು ಎಂದರು.

ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನದಿ ದಡದಲ್ಲಿರುವವರಿಗೆ ಮತ್ತು ಮನೆ ಕಳೆದುಕೊಂಡವರಿಗೆ, ಪ್ರವಾಹದಲ್ಲಿ ಸಾವನ್ನಪ್ಪಿರುವವರಿಗೆ ಈಗಾಗಲೇ ಘೋಷಣೆಯಾಗಿರುವಂತೆ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವದು. ಮನೆ ಕಳೆದುಕೊಂಡವರಿಗೆ ಮನೆ ವ್ಯವಸ್ಥೆ, ಆಸ್ತಿ-ಪಾಸ್ತಿ ನಷ್ಟವಾಗಿರು ವವರಿಗೆ ಪರಿಹಾರ ವ್ಯವಸ್ಥೆಯನ್ನು ಶೀಘ್ರದಲ್ಲೇ ಮಾಡಲಾಗುವದು. ಇನ್ನೂ ಸಿಗದ ನಾಲ್ಕು ಮೃತ ದೇಹಗಳ ಬಗ್ಗೆ ಪತ್ತೆಹಚ್ಚಿ ವಾರಸುದಾರರಿಗೆ ಒಪ್ಪಿಸಲು ಅಧಿಕಾರಿಗಳು ಪ್ರ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ನೂರಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಜನಪ್ರತಿನಿಧಿಗಳು ಕೊಡಗು ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್, ಮಾಜಿ ಎಂಎಲ್‍ಸಿ ಎಸ್.ಜಿ. ಮೇದಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ ಸದಸ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯಾ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು.

ವರದಿ: ಕೆ.ಕೆ. ನಾಗರಾಜ ಶೆಟ್ಟಿ, ವಾಸು, ಚಿತ್ರಗಳು: ಲಕ್ಷ್ಮೀಶ್