ಗೋಣಿಕೊಪ್ಪ, ಆ. 29: ಇಲ್ಲಿನ ಕಾವೇರಿ ಎಜುಕೇಷನ್ ಸೊಸೈಟಿಯ ಸುವರ್ಣ ಕಾವೇರಿ ಸಾಂತ್ವನ ಯೋಜನೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಮಂಗಳೂರಿನ ಯನಪೋಯ ಡೀಮ್ಡ್ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಪ್ರಥಮ ಚಿಕಿತ್ಸೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ತಾ. 31 ರಂದು ಬೆಳಿಗ್ಗೆ 11 ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎ.ಸಿ. ಗಣಪತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಡಾ. ಗಣನಾಥ್ ಶೆಟ್ಟಿ ಎಕ್ಕಾರ್, ಡಾ. ಪೂರ್ಣಿಮ ಜೋಗಿ, ಯನಪೋಯ ವಿ.ವಿ.ಯ ಎನ್‍ಎಸ್‍ಎಸ್ ಯೋಜನಾಧಿಕಾರಿ ಡಾ. ಅಶ್ವಿನಿ ಶೆಟ್ಟಿ, ಡಾ. ತಿಪ್ಪೆಸ್ವಾಮಿ ಅತಿಥಿಗಳಾಗಿ ಭಾಗವಹಿಸುತ್ತಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಡಾ. ಎಜಾಜ್, ಡಾ. ಇಮ್ರಾನ್ ಪಾಷ, ಡಾ. ವಿಷ್ಣು ಭಾಗವಹಿಸಲಿದ್ದಾರೆ.