ಕೂಡಿಗೆ, ಆ. 29: ಕೂಡುಮಂಗೂರು ಗ್ರಾಮ ಪಂಚಾಯಿತಿಯಲ್ಲಿ ಜಲಶಕ್ತಿ-ಜಲಾಮೃತ ಅಭಿಯಾನದ ವಿಶೇಷ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಲ ಸಂರಕ್ಷಣೆಯ ಬಗ್ಗೆ ವಿಶೇಷ ಮಾಹಿತಿ, ಸರ್ಕಾರದ ಆದೇಶ ಮತ್ತು ವಿಶೇಷ ಉದ್ದೇಶವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಲಮೂಲಗಳ ಸ್ಥಿತಿಗತಿ, ಅರಣ್ಯೀಕರಣ, ಕೊಳವೆಬಾವಿ ಮತ್ತು ಮಳೆನೀರು ಕೊಯ್ಲು ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು. ಗ್ರಾಮದಲ್ಲಿ ಗ್ರಾಮದ ಜಲಮೂಲವನ್ನು ಹೆಚ್ಚಿಸುವ ಉದ್ದೇಶ, ನೀರಿನ ಸಂರಕ್ಷಣೆ, ನೀರನ್ನು ತೆರೆದ ಬಾವಿಗಳಲ್ಲಿ ಸಂರಕ್ಷಿಸುವ ಬಗ್ಗೆ ಸವಿಸ್ತಾರವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ಇವುಗಳಿಗೆ ಸಂಬಂಧಿಸಿದಂತೆ ವಿಶೇಷ ಮಾಹಿತಿಗಳನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೆಷಾ ಸಭೆಗೆ ತಿಳಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಕೆ.ವಿ. ಸಣ್ಣಪ್ಪ ಮತ್ತು ಸದಸ್ಯರು ಇದ್ದರು.