ಶನಿವಾರಸಂತೆ, ಆ. 29: ಆಲೂರು ಸಿದ್ದಾಪುರದ ವಿಜಯ ಯುವಕ ಸಂಘದ ವತಿಯಿಂದ ಸೆ.3ರಂದು ಕೈಲ್‍ಮುಹೂರ್ತ ಹಬ್ಬದ ಪ್ರಯುಕ್ತ ಆಲೂರು ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆಯ ಗ್ರಾಮೀಣ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ಶಾಲಾ - ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾಕೂಟ ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

ಸೆ.3ರಂದು ಕೈಲ್‍ಮುಹೂರ್ತ ಹಬ್ಬದ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರಮೂರ್ತಿ ಉದ್ಘಾಟಿಸಲಿರುವರು. ಸಂಜೆ 5 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜಯ ಯುವಕ ಸಂಘದ ಅಧ್ಯಕ್ಷ ಪುದಿಯನೆರವನ ಪ್ರದೀಪ್ ಅಧ್ಯಕ್ಷತೆ ವಹಿಸಲಿದ್ದು, ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಜಿ.ಪಂ. ಸದಸ್ಯೆ ಸರೋಜಮ್ಮ, ತಾ.ಪಂ. ಸದಸ್ಯೆ ಲೀಲಾವತಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.