ವೀರಾಜಪೇಟೆ, ಆ. 29: ವೀರಾಜಪೇಟೆ ತಾಲೂಕು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾಗಿ ತೂಕ್‍ಬೊಳಕ್ ಪತ್ರಿಕೆಯ ಸಂಪಾದಕ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುರಭವನದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನಿಕಟಪೂರ್ವ ಅಧ್ಯಕ್ಷ ಪುಲಿಯಂಡ ಪಿ ಪೊನ್ನಪ್ಪ ಅಧಿಕಾರ ಹಸ್ತಾಂತರಿಸಿದರು.