ಮಡಿಕೇರಿ, ಆ. 31: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಿಗೆ 1ನೇ ತರಗತಿಯಿಂದ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಎಸ್‍ಎಸ್‍ಎಲ್‍ಸಿ ಮತ್ತು ನಂತರ ವ್ಯಾಸಂಗ ಮಾಡುತ್ತಿರುವ ಶೇ. 40 ಕ್ಕಿಂತ ಹೆಚ್ಚು ದೃಷ್ಟಿದೋಷವಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಎಸ್‍ಎಸ್‍ಎಲ್‍ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣದ ಶುಲ್ಕ ಮರುಪಾವತಿ ಮಾಡುವ ಯೋಜನೆ, ಸ್ಪರ್ಧಾಚೇತನ ಹಾಗೂ 20 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡುವ ಯೋಜನೆಗಳಿದ್ದು ಈ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಶೇಷಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ. 08272-222830 ನ್ನು ಸಂಪರ್ಕಿಸಬಹುದು.