ಶನಿವಾರಸಂತೆ, ಆ. 31: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಗೌಡಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಫುಟ್‍ಬಾಲ್ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದ ಫುಟ್‍ಬಾಲ್‍ನಲ್ಲಿ ಪ್ರಥಮ, ಕಬಡ್ಡಿಯಲ್ಲಿ ದ್ವಿತೀಯ, ವೈಯಕ್ತಿಕ ವಿಭಾಗದಲ್ಲಿ 3000 ಮೀ., 1500 ಮೀ., 800 ಮೀಟರ್ ಓಟದಲ್ಲಿ ಕೆ.ಆರ್. ಕೃಷ್ಣ ಪ್ರಥಮ, 800 ಮೀಟರ್ ಓಟದಲ್ಲಿ ಬಿ.ಎಸ್. ಸುನಿಲ್ ಪ್ರಥಮ, ಎತ್ತರ ಜಿಗಿತದಲ್ಲಿ ಬಿ.ಪಿ. ಸ್ಟೀವನ್ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ಎನ್. ದರ್ಶಿತ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಹಾಕಿಯಲ್ಲಿ ಪ್ರಥಮ, ವೈಯಕ್ತಿಕ ವಿಭಾಗದ 3000 ಮತ್ತು 1500 ಮೀ.ಓಟದಲ್ಲಿ ಎನ್.ಎಲ್. ಅಂಕಿತ ಪ್ರಥಮ, ಉದ್ದ ಜಿಗಿತದಲ್ಲಿ ಎಸ್.ಎಂ. ಭವಿಷ್ಯ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.