ಗೋಣಿಕೊಪ್ಪ ವರದಿ, ಆ. 31: ಪೊನ್ನಂಪೇಟೆ ಕ್ಲಸ್ಟರಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅಪ್ಪಚ್ಚಕವಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ಮಲ್ಚೀರ ಆಶಾ ಗಣೇಶ್ ಮಾತನಾಡಿ, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಉದ್ಘಾಟನೆಯನ್ನು ವನಜಾಕ್ಷಿ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಬಯವಂಡ ಉತ್ತಪ್ಪ, ಕೆ.ಸಿ. ಗೀತಾಂಜಲಿ, ಜೈಸಿ ಜೋಸೆಫ್, ಯಲ್ಲಪ್ಪ ಪೂಜಾರಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ್, ಶ್ರೀನಿವಾಸ್, ಅಜಿತ, ಪುಷ್ಪ, ಜ್ಯೋತಿಶ್ವರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪುಟ್ಟರಾಜು, ಶಾಲೆಯ ಮುಖ್ಯ ಶಿಕ್ಷಕಿ ತನುಜ ಇದ್ದರು.