ಸೋಮವಾರಪೇಟೆ, ಆ. 31: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಕುರಿತ ಮಾಹಿತಿ ಕಾರ್ಯಾಗಾರ ಇಲ್ಲಿನ ಜ್ಞಾನ ವಿಕಾಸ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಮಣಿಪಾಲ್ ಕೆ.ಎಂ.ಸಿ. ಆಸ್ಪತ್ರೆಯ ಮನೋತಜ್ಞ ಡಾ. ಕೆ.ಪಿ. ಗಿರೀಶ್ ಅವರು, ವಿದ್ಯಾರ್ಥಿಗಳಿಗೆ ಮನಸ್ಸು ಮತ್ತು ನೆನಪಿನ ಶಕ್ತಿಯ ನಿರ್ವಹಣೆ ಬಗ್ಗೆ ಮಾಹಿತಿ ಒದಗಿಸಿದರು. ತಾಳ್ಮೆ, ಆಸಕ್ತಿ, ಏಕಾಗ್ರತೆ, ಧೈರ್ಯ, ಛಲ ಮತ್ತು ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಯಶಸ್ಸು ಗಳಿಸಬಹುದು. ನಮ್ಮ ಭವಿಷ್ಯ ನಮ್ಮ ಕೈಯಲ್ಲೇ ಇದೆ ಎಂಬದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕಿವಿಮಾತು ನುಡಿದರು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಕವಿತ ಸೇರಿದಂತೆ ಸಹ ಶಿಕ್ಷಕರು ಉಪಸ್ಥಿತರಿದ್ದರು.