ವೀರಾಜಪೇಟೆ, ಆ. 31: ವೀರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣ ಹಾಗೂ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ, ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಹೊಸ ಆಧಾರ್ ನೋಂದಾಣಿ ಹಾಗೂ ಆಧಾರ್ ತಿದ್ದುಪಡಿಗಾಗಿ ಇಂದಿನಿಂದ ಸೆ. 14ರ ವರೆಗೆ ಆಧಾರ್ ಕ್ಯಾಂಪ್ ನಡೆಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.