ಮಡಿಕೇರಿ, ಆ. 30: ಭರ್ತಿಯಾಗಿರುವ ಹಾರಂಗಿ ಜಲಾಶಯಕ್ಕೆ ತಾ. 31ರಂದು (ಇಂದು) ಬಾಗಿನ ಅರ್ಪಿಸುವ ಕಾರ್ಯ ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಆರ್. ಸುರೇಶ್‍ಕುಮಾರ್, ಸಂಸದರು, ಶಾಸಕರುಗಳು, ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿರುವರು.