ಕುಶಾಲನಗರ, ಆ. 31: ಕುಶಾಲನಗರ ವೃತ್ತಿನಿರತರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಹಿಳಾ ಚೇತನ ಗುಂಪು ಸಾಲ ಯೋಜನೆಗೆ ಚಾಲನೆ ನೀಡಲಾಯಿತು.

ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಉದ್ಘಾಟಿಸಿದರು. ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ಪ್ರಸ್ತಾವಿಕ ನುಡಿಗಳಾಡಿ ಯೋಜನೆಯ ಬಗ್ಗೆ ಮಾಹಿತಿ ಒದಗಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಎಂ.ಎಂ. ಶಾಹಿರ್, ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರ, ನಾಮನಿರ್ದೇಶಿತ ನಿರ್ದೇಶಕ ಗುರುಮಲ್ಲಪ್ಪ, ಸಹಕಾರ ಸಂಘಗಳ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್‍ನಾಯಕ್, ಆಂತರಿಕ ಲೆಕ್ಕ ಪರಿಶೋಧಕ ಚಂದ್ರಶೇಖರ್ ಸೇರಿದಂತೆ ನಿರ್ದೇಶಕರುಗಳು ಇದ್ದರು.