ವೀರಾಜಪೇಟೆ, ಆ. 31: ವೀರಾಜಪೇಟೆ ವಿಭಾಗದ ಡಿ.ವೈ.ಎಸ್.ಪಿ ಆಗಿ ಜಯಕುಮಾರ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ವೀರಾಜಪೇಟೆಯಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಡಿ.ವೈ.ಎಸ್.ಪಿ. ನಾಗಪ್ಪ ಅವರು ಬಡ್ತಿ ಹೊಂದಿ ಅಡಿಷನಲ್ ಎಸ್.ಪಿ. ಹಾಸನದ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರಿಂದ ಈ ಸ್ಥಾನ ತೆರವಾಗಿತ್ತು.
ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಸಬ್‍ಇನ್ಸ್‍ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂತೋಷ್ ಕಶ್ಯಪ್ ಅವರು ಸರ್ಕಲ್ ಇನ್ಸ್‍ಪೆಕ್ಟರ್ ಆಗಿ ಬಡ್ತಿ ಹೊಂದಿ ಹಾಸನದ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರಿಂದ ಈ ಸ್ಥಾನ ತೆರವಾಗಿದೆ.