ಸೋಮವಾರಪೇಟೆ, ಆ. 31: ಗೌಡಳ್ಳಿ ಬಿ.ಜಿ.ಎಸ್. ಶಾಲಾ ಮೈದಾನದಲ್ಲಿ ನಡೆದ ವಲಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಎತ್ತರ ಜಿಗಿತದಲ್ಲಿ 7ನೇ ತರಗತಿಯ ಎಂ.ಬಿ. ಅಂಜಲಿ, ಭಾರದ ಗುಂಡು ಎಸೆತ ಹಾಗೂ ಡಿಸ್ಕಸ್ ಥ್ರೋನಲ್ಲಿ ಹೆಚ್.ಟಿ. ಪವಿತ್ರ ದ್ವಿತೀಯ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.