ಸೋಮವಾರಪೇಟೆ, ಆ. 31: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಪ್ರತಿಭೋತ್ಸವ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಮಲೇಷಿಯಾದ ಮೆಲಕದಲ್ಲಿ ನಡೆದ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ತಾಲೂಕಿನ ಸಚಿನ್ ಪೂವಯ್ಯ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಅಮೃತ್, ಸಂಸ್ಥೆಯ ಸಂಚಾಲಕ ಎಂ. ರಾಯಪ್ಪ, ಪ್ರಾಂಶುಪಾಲ ಅಂತೋಣಿರಾಜ್, ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತಿಭೋತ್ಸವ: ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಆ್ಯನಿ ಡಿಸೋಜ, ಲತಾ, ಡಿ. ಚೆನ್ನಮ್ಮ ಕಾಲೇಜಿನ ಪ್ರಿಯಾ ಅವರುಗಳು ತೀರ್ಪುಗಾರರಾಗಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಎಂ. ರಾಯಪ್ಪ, ಪ್ರಾಂಶುಪಾಲ ಅಂತೋಣಿರಾಜ್ ಸೇರಿದಂತೆ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಾನಿಯ, ಸುಪ್ರಭ, ನಿಶಾಂತ್, ಅಫ್ಸಲ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.