ಮಡಿಕೇರಿ, ಆ. 31: ಎಐಸಿಸಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೇತೃತ್ವದಲ್ಲಿ ಸೆ. 3 ಮತ್ತು 4 ರಂದು ಮಹಾರಾಷ್ಟ್ರದ ಸೇವಾ ಗ್ರಾಮದಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ ಪ್ರತಿನಿಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ತಿಳಿಸಿದ್ದಾರೆ. ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಹತ್ವಪೂರ್ಣವಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.