ಮಡಿಕೇರಿ, ಸೆ. 1: ಸಂಪಾಜೆ ಹೋಬಳಿಯ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ನೆರೆ ಪರಿಹಾರದ ಚೆಕ್ ವಿತರಣೆಯು ತಾ. 31 ರಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಪ್ರಕೃತಿ ವಿಕೋಪದಿಂದ ಮೂಲ ಸೌಕರ್ಯವನ್ನು ಕಳೆದುಕೊಂಡಿರುವ ಒಟ್ಟು 23 ಕುಟುಂಬಸ್ಥರಿಗೆ ಪರಿಹಾರದ ಚೆಕ್ ನ್ನು ವಿತರಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ತಾಲೂಕು ಪಂಚಾಯತ್ ಸದಸ್ಯೆ ಕುಮುದಾ, ಪಯಶ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ ಉರುಬೈಲು, ತಹಶೀಲ್ದಾರ್ ಮಹೇಶ್, ಕಂದಾಯ ಪರಿವೀಕ್ಷಕ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ ಮತ್ತು ಪಂಚಾಯತ್‍ನ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.