ಗೋಣಿಕೊಪ್ಪ ವರದಿ, ಸೆ. 3: ಉತ್ತಮ ಮನಸ್ಸು ಹೊಂದಿರುವವ ರಿಂದ ಮಾತ್ರ ಸಮಾಜವನ್ನು ಬದಲಿಸಲು ಸಾಧ್ಯವಿದೆ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಡಾ. ಪೂರ್ಣಿಮ ಜೋಗಿ ಅಭಿಪ್ರಾಯ ಪಟ್ಟರು. ಇಲ್ಲಿನ ಕಾವೇರಿ ಕಾಲೇಜು ಆವರಣದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ, ಸುವರ್ಣ ಕಾವೇರಿ ಸಾಂತ್ವನ ಯೋಜನೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯೆನೆÀಪೊಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ಯಾನ್ಸರ್ ಅರಿವು ಜಾಗೃತಿ ಕಾರ್ಯಕ್ರಮ ಮತ್ತು ಮೂಲಭೂತ ಜೀವನ ಆಧಾರ ಮತ್ತು ಪ್ರಥಮ ಚಿಕಿತ್ಸೆ ತರಬೇತಿ ಉದ್ಘಾಟಿಸಿ ಮಾತನಾಡಿದರು.

ಯೆನೆಪೊಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನಿ ಎಸ್. ಶೆಟ್ಟಿ ಮಾತನಾಡಿ, ಕ್ಯಾನ್ಸರ್ ರೋಗದ ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿಕೊಂಡು ಆರೋಗ್ಯ ಕಾಪಾಡುವಲ್ಲಿ ಕಾಳಜಿ ವಹಿಸಬೇಕು ಎಂದರು. ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಎ.ಸಿ. ಗಣಪತಿ ಮಾತನಾಡಿ, ಒಂದಷ್ಟು ರೋಗಕ್ಕೀಡಾದವರು ಮೂಢನಂಬಿಕೆ ಯಿಂದ ಅವೈಜ್ಞಾನಿಕ ವಾಗಿ ರೋಗ ನಿಯಂತ್ರಣಕ್ಕೆ ಮುಂದಾಗುವದರಿಂದ ಕ್ಯಾನ್ಸರ್ ನಂತಹ ಕಾಯಿಲೆಯಿಂದ ಹೆಚ್ಚು ತೊಂದರೆಗೀಡಾಗುತ್ತಿರುವ ಘಟನೆ ನಡೆಯುತ್ತಿದೆ ಎಂದು ಹೇಳಿದರು. ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಮತ್ತು ಕ್ಯಾನ್ಸರ್ ಬಗ್ಗೆ ವೈದ್ಯರಾದ ಡಾ. ಅಜೀಜ್, ಡಾ. ಇಮ್ರಾನ್ ಪಾಶಾ, ಡಾ. ವಿಷ್ಣು, ಡಾ. ಧನಂಜಯ, ಡಾ. ವಿನುತ್, ಡಾ. ಲಿಜೋ, ಡಾ. ರಾಹುಲ್ ಅರಿವು ಮೂಡಿಸಿದರು.

ಈ ಸಂದರ್ಭ ಯೆನೆಪೊಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ, ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ವಿ. ಕುಸುಮಾಧರ್, ಕಾವೇರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಶ್ರೀನಿವಾಸ್, ಎನ್‍ಎಸ್‍ಎಸ್ ಅಧಿಕಾರಿಗಳಾದ ವನೀತ್‍ಕುಮಾರ್, ಎನ್.ಪಿ. ರೀತಾ, ನಿರ್ಮಿತಾ, ತಿರುಮಲ್ಲಯ್ಯ, ದೀಪಾ, ಪ್ರಸಾದ್‍ರಾವ್ ಉಪಸ್ಥಿತರಿದ್ದರು.