ಕೂಡಿಗೆ, ಸೆ. 3: ಮುಳ್ಳುಸೋಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಕರ್ನಾಟಕ ಕಾವಲುಪಡೆಯ ವತಿಯಿಂದ ವನಮಹೋತ್ಸವ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಉಪ ವಲಯ ಅರಣ್ಯ ಅಧಿಕಾರಿ ಫೀರೋಜ್ ಖಾನ್, ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ತಿಳಿಸಿದರು. ಕರ್ನಾಟಕ ಕಾವಲುಪಡೆ ಜಿಲ್ಲಾ ಅಧ್ಯಕ್ಷ ಎಂ. ಕೃಷ್ಣ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ನಮನ್ ನಾಯಕ್, ಸಂಪನ್ಮೂಲ ವ್ಯಕ್ತಿ ಗೋವಿಂದರಾಜ್, ಮುಖ್ಯ ಶಿಕ್ಷಕಿ ಎಚ್.ಎಂ. ಸುಶೀಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮೈಮುನ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.