ಚೆಟ್ಟಳ್ಳಿ, ಸೆ. 4: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ 2018-19ನೇ ಸಾಲಿನಲ್ಲಿ ಜಿಲ್ಲೆಯ 8 ಶಿಕ್ಷಕರು ಭಾಜನರಾಗಿದ್ದಾರೆ. ಪ್ರೌಢ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಚೆಂಬು ಸ.ಪ್ರೌ. ಶಾಲೆಯ ಮುಖ್ಯ ಶಿಕ್ಷಕಿ ದೇಚಮ್ಮ, ಸೋಮವಾರಪೇಟೆ ತಾಲೂಕಿನ ನೇರುಗಳಲೆ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಎಸ್.ಎಂ. ಇಬ್ರಾಹಿಂ, ವೀರಾಜಪೇಟೆ ತಾಲೂಕಿನ ಬೆಕ್ಕೆಸೊಡ್ಲುರು ಶಾರದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಆರ್. ಬಸವರಾಜು ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಚೆರಿಯಪರಂಬು ಸ.ಹಿ.ಪ್ರಾ ಶಾಲೆಯ ಸಹಶಿಕ್ಷಕ ಟಿ.ಹೆಚ್. ಸುಕುಮಾರ್, ಸೋಮವಾರಪೇಟೆ ತಾಲೂಕಿನ ಕೂಡಿಗೆ ಸ.ಮಾ.ಪ್ರಾ. ಶಾಲೆಯ ದೈಹಿಕ ಶಿಕ್ಷಕ ಎಂ.ಎ. ಆನಂದ್, ವೀರಾಜಪೇಟೆ ತಾಲೂಕಿನ ಬೇಟೋಳಿ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಬಿ. ಸೀತಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಹಳೆ ಚೆಂಬು ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕ ಸೆಲೆಸ್ಟಿನ್ ಲೋಬೋ ಹಾಗೂ ಸೋಮವಾರಪೇಟೆ ತಾಲೂಕಿನ ದೊಡ್ಡಭಂಡಾರ ಸ.ಕಿ.ಪ್ರಾ. ಶಾಲೆಯ ಸಹಶಿಕ್ಷಕ ಬಿ.ಟಿ. ವಿಶ್ವನಾಥ್ ಆಯ್ಕೆಗೊಂಡಿದ್ದಾರೆ.

- ಇಸ್ಮಾಯಿಲ್