ಮಡಿಕೇರಿ, ಸೆ. 5: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕøತಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ತಾ. 6 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ, ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.