ಸೋಮವಾರಪೇಟೆ, ಸೆ. 4: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಗ್ರಾಮದಲ್ಲಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ನಷ್ಟವಾಗಿದೆ.
ಹೊಸತೋಟ ಗ್ರಾಮದ ಸುಬೈದ ಸಯ್ಯದ್ ಅವರಿಗೆ ಸೇರಿದ ವಾಸದ ಮನೆಯ ಗೋಡೆ, ಅತೀ ಶೀತದಿಂದ ಕುಸಿದು ಬಿದ್ದಿದ್ದು, ಛಾವಣಿ ಜಖಂಗೊಂಡಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ತಿಮ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.