ಕೂಡಿಗೆ, ಸೆ. 5: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಮುಳ್ಳುಸೋಗೆ ಗ್ರಾ.ಪಂ. ಸಭಾಂಗಣದಲ್ಲಿ ತಾ. 6 ರಂದು (ಇಂದು) ನಡೆಯಲಿದೆ. ಜಮಾಬಂದಿ ಸಭೆಯು ಗ್ರಾ.ಪಂ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ನೋಡಲ್ ಅಧಿಕಾರಿ ಹೇಮಂತ್‍ಕುಮಾರ್ ಭಾಗವಹಿಸಲಿದ್ದಾರೆ. ಸಭೆಗೆ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.