ಮಡಿಕೇರಿ, ಸೆ. 4: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಮಾರಂಭವು ತಾ. 5 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್‍ಸಿಂಹ, ಶಾಸಕರಾದ ಎಂ.ಪಿ. ಸುನಿಲ್‍ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ. ಅಧ್ಯಕ್ಷ ತೆಕ್ಕಡೆ ಶೋಭಾ ಮೋಹನ್, ಆರ್.ಆರ್. ಆಸ್ಪತ್ರೆಯ ಮಕ್ಕಳ ತಜ್ಞರಾದ ಬಿ.ಸಿ. ನವೀನ್‍ಕುಮಾರ್. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಇತರರು ಪಾಲ್ಗೊಳ್ಳಲಿದ್ದಾರೆ.