ಮಡಿಕೇರಿ, ಸೆ. 5: ಕುಟುಂಬ ಕಲ್ಯಾಣ ಕಾರ್ಯಕ್ರಮದ ಶಸ್ತ್ರ ಚಿಕಿತ್ಸಾ ಶಿಬಿರವು ತಾ. 11 ರಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ, ತಾ. 21 ರಂದು ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆ, ತಾ. 18 ರಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ, ತಾ. 25 ರಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ, ತಾ. 23 ರಂದು ಸಿದ್ದಾಪುರ ಮತ್ತು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ, ತಾ. 16 ರಂದು ಕುಟ್ಟ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಪ್ರೋಸ್ಕೋಪಿಕ್ ಶಿಬಿರವು ನಡೆಯಲಿದೆ. ತಾ. 27 ರಂದು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ತಾ. 17 ರಂದು ಚೆಟ್ಟಳ್ಳಿ ಮತ್ತು ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾ. 20 ರಂದು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ತಾ. 13 ರಂದು ಸಿದ್ದಾಪುರ ಮತ್ತು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾ. 24 ರಂದು ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ಯುಬೆಕ್ಟಮಿ ಶಸ್ತ್ರ ಚಿಕತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದ್ದಾರೆ.