ಮಡಿಕೇರಿ, ಸೆ. 4: ಅಕ್ಟೋಬರ್ 15 ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯ ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ರ ಸಂಬಂಧ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮನ್ನು ಅಕ್ಟೋಬರ್ 15 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿ ಸಲಾಗಿದೆಯೇ ಎಂಬದನ್ನು ಪರಿಶೀಲಿಸಿ ಧೃಢೀಕರಿಸುವದು ಹಾಗೂ ವಿವರಗಳನ್ನು ಪರಿಶೀಲಿಸಿ ಸರಿಯಾಗಿ ದೆಯೇ ಎಂದು ಖಚಿತಪಡಿಸಿ ಕೊಳ್ಳುವದು, ಪಟ್ಟಿಯಲ್ಲಿನ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವ ಬಗ್ಗೆ ಮತ್ತು ನಮೂದುಗಳು ಸರಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು ಹಾಗೂ ನೋಂದಣಿಯಾಗದೆ ಇರುವ ಯುವಕ, ಯುವತಿಯರು ಮತ್ತು ನಾಗರಿಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಇಂದಿನಿಂದ ಅಕ್ಟೋಬರ್ 15 ವರೆಗೆ 45 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಮತದಾರರ ಪಟ್ಟಿಗೆ ಸೇರ್ಪಡೆ, ಹೆಸರು ತೆಗೆಯಲು, ಸರಿಪಡಿಸಲು ಮತ್ತು ವರ್ಗಾವಣೆ ಮಾಡಲು ನಾಗರಿಕರು ಮತದಾರರು ಕ್ರಮ ಕೈಗೊಳ್ಳ ಬಹುದಾಗಿದೆ. ಆ ನಿಟ್ಟಿನಲ್ಲಿ ಸೇರ್ಪಡೆ:- ಜನವರಿ 01, 2020 ಕ್ಕೆ 18 ವರ್ಷ ತುಂಬಲಿರುವ ನಾಗರಿಕರು ನಮೂನೆ-6 ರೊಂದಿಗೆ ಪೂರಕ ದಾಖಲೆಗಳನ್ನು ಹಾಗೂ ಭಾವಚಿತ್ರವನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ತೆಗೆದು ಹಾಕುವದು. ಸ್ಥಳಾಂತರಗೊಂಡ ಹಾಗೂ ಮರಣಹೊಂದಿರುವ ಮತದಾರರ ಹೆಸರನ್ನು ನಮೂನೆ-7 ರೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ: ಮತದಾರರ ವಿವರಗಳಲ್ಲಿ ನ್ಯೂನ್ಯತೆಗಳಿದ್ದಲ್ಲಿ ನಮೂನೆ-8 ರೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ಮತದಾರರ ವಿವರಗಳನ್ನು ತಿದ್ದುಪಡಿ ಮಾಡಬಹುದಾಗಿದೆ.

ವರ್ಗಾವಣೆ: ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅನಿವಾಸಿ ಭಾರತೀಯರ ನೋಂದಣಿ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಪರಿಶೀಲನೆ ಮತ್ತು ಧೃಢೀಕರಣ: ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸ ಲಾಗಿದೆಯೇ ಎಂದು ಪರಿಶೀಲಿಸಿ ಧೃಢೀಕರಿಸಲು ಹಾಗೂ ಮತದಾರರ ವಿವರಗಳನ್ನು ಪರಿಶೀಲಿಸಿ ಸರಿಯಾಗಿ ದೆಯೇ ಎಂಬದನ್ನು ಮತಗಟ್ಟೆ ಅಧಿಕಾರಿ, ಉಪವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿ, ಅಟಲ್‍ಜೀ ಜನಸ್ನೇಹಿ ಕೇಂದ್ರ (ನಾಡ ಕಛೇರಿ), ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯತ್), ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಖಚಿತಪಡಿಸಿ ಕೊಳ್ಳಬಹುದಾಗಿದೆ ಎಂದು ಅವರು ವಿವರಿಸಿದರು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸ ಲಾಗಿದೆಯೇ ಎಂದು ಪರಿಶೀಲಿಸಿ ಧೃಢೀಕರಿಸಲು ಹಾಗೂ ಮತದಾರರ ವಿವರಗಳನ್ನು ಪರಿಶೀಲಿಸಿ ಸರಿಯಾ ಗಿದೆಯೇ ಖಚಿತಪಡಿಸಿಕೊಳ್ಳಲು ಭಾರತೀಯ ಪಾಸ್‍ಪೋರ್ಟ್, ಚಾಲನಾ ಪರವಾನಿಗೆ, ಆಧಾರ್ ಪತ್ರ, ಪಡಿತರ ಚೀಟಿ, ಸರ್ಕಾರಿ,ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪಾಸ್‍ಬುಕ್, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವದಾರೂ ಒಂದು ದಾಖಲೆಗಳು ನೀಡಬೇಕಿದೆ ಎಂದರು. ನಾಗರಿಕರು ಈ ಕೆಳಕಂಡ ವೆಬ್‍ಸೈಟ್, ಮೊಬೈಲ್ ಆಪ್ ಮುಖಾಂತರವೂ ಸಹ ಪರಿಶೀಲಿಸಿ ಧೃಢೀಕರಿಸಿಕೊಳ್ಳಬಹುದು, “ಮತದಾರರ ಸಹಾಯವಾಣಿ” ಮೊಬೈಲ್ ಆಪ್, ಹೊಸ ಎನ್.ವಿ.ಎಸ್.ಪಿ. ಪೋರ್ಟಲ್ (ತಿತಿತಿ.ಟಿvsಠಿ.iಟಿ), 1950 ಮತದಾರರ ಸಹಾಯವಾಣಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ. ಹಾಗೆಯೇ ಮತಗಟ್ಟೆಗೆ ಸಂಬಂಧ ಪಟ್ಟಂತೆ ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಈ ಸಂದರ್ಭ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲಾಗಿದೆಯೇ ಎಂದು ಪರಿಶೀಲಿಸಿ ಧೃಢೀಕರಿಸ ಬಹುದಾಗಿದೆ ಹಾಗೂ ಮತದಾರರ ವಿವರಗಳನ್ನು ಪರಿಶೀಲಿಸಿ ಸರಿಯಾಗಿ ದೆಯೇ ಎಂದು ಖಚಿತಪಡಿಸಿ ಕೊಳ್ಳುವದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾರರ ವಿವರಗಳಲ್ಲಿ ತಿದ್ದುಪಡಿ ಗಳಿದ್ದಲ್ಲಿ ಸಂಬಂಧಿತ ದಾಖಲೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯ 208-ಮಡಿಕೇರಿ ಮತ್ತು 209-ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 543 ಮತಗಟ್ಟೆಗಳು ಇದ್ದು, ಹಾಲಿ ಇರುವ ಮತಗಟ್ಟೆಗಳನ್ನು ಬದಲಾವಣೆ ಮಾಡಬೇಕಾಗಿದ್ದಲ್ಲಿ ಮಾಹಿತಿಯನ್ನು ನೀಡಿದ್ದಲ್ಲಿ ಪರಿಶೀಲನೆ ಮಾಡಿ ಮತಗಟ್ಟೆ ಬದಲಾವಣೆ ಮಾಡಲು ಕ್ರಮವಹಿಸಲಾಗುವದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯ, ಚುನಾವಣಾ ತಹಶೀಲ್ದಾರ್ ಕುಸುಮ, ತಹಶೀಲ್ದಾರ್ ಮಹೇಶ್, ಅನಿಲ್ ಕುಮಾರ್, ಸಿನೋಜ್ ಇತರರು ಇದ್ದರು.