ಮಡಿಕೇರಿ, ಸೆ. 4: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಜೀಲ್ ಕೃಷ್ಣ(ಬಿಜೆಪಿ), ತೆನ್ನಿರಾ ಮೈನಾ (ಕಾಂಗ್ರೆಸ್) ಮತ್ತು ಗಿರೀಶ್(ಕಮ್ಯುನಿಷ್ಟ್) ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಬೂತ್ ಮಟ್ಟದ ಅಧಿಕಾರಿಗಳು ಇದೀಗ ಅಕ್ಟೋಬರ್ 15 ರವರೆಗೆ ಮನೆ ಮನೆಗೆ ಭೇಟಿ ನೀಡಲಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 2019 ರ ಜನವರಿ 2 ರ ನಂತರ 18 ವರ್ಷ ಪೂರ್ಣಗೊಂಡಿರುವ ಮತ್ತು 2020 ರ ಜನವರಿ 1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿಯನ್ನು ಸ್ವೀಕರಿಸಲಿದ್ದು, ಈ ಸಂಬಂಧ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಪ್ರಮುಖರಲ್ಲಿ ಜಿಲ್ಲಾಧಿಕಾರಿ ಕೋರಿದರು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ನಾಗರೀಕರು ನೇರವಾಗಿ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ತಿತಿತಿ.ಟಿvsಠಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ನಮೂನೆ-6,7,8 ಮತ್ತು 8ಎ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದರು.
ಮತಗಟ್ಟೆವಾರು ಬೂತ್ ಮಟ್ಟದ ಏಜೆಂಟರುಗಳನ್ನು ನೇಮಕ ಮಾಡಿರುವ ಬಗ್ಗೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರುಗಳ ಹೆಸರು ವಿವರಗಳನ್ನು ಮತಗಟ್ಟೆವಾರು ನೀಡುವಂತೆ ಅವರು ಮನವಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಧಿಕಾರಿ ಟಿ.ಜವರೇಗೌಡ ಚುನಾವಣಾ ತಹಶೀಲ್ದಾರ್ ಕುಸುಮ, ಜಿಲ್ಲಾಧಿಕಾರಿಗಳ ಕಚೇರಿಯ ಅನಿಲ್ ಕುಮಾರ್ ಇತರರು ಇದ್ದರು.