ಮಡಿಕೇರಿ, ಸೆ. 5: ಗಾಳಿಬೀಡು- ಪಾಟಿ- ಕಾಲೂರು ಶಾಲೆ ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡಗಳ ಜರಿತದಿಂದ ರಸ್ತೆಗಳು ಹಾಳಾಗಿದ್ದು, ದುರಸ್ತಿ ಕಾಮಗಾರಿ ಕೈಗೊಂಡು ಸಂಚಾರಕ್ಕೆ ಯೋಗ್ಯವಾದ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಎಲ್ಲ ವಾಹನ ಸಂಚಾರಿಗಳ, ರಸ್ತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, 34(ಬಿ),(ಸಿ),(ಡಿ) ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ರಲ್ಲಿ ದತ್ತವಾದ ಅದಿsಕಾರದಂತೆ ಹೊರಡಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಾ.30 ರವರೆಗೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ಗಾಳಿಬೀಡು-ಪಾಟಿ-ಕಾಲೂರು ಶಾಲೆ ರಸ್ತೆಯಲ್ಲಿ ಪ್ರಯಾಣಿಕರ ಲಘು ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ನಿಷೇಧಿತ ವಾಹನಗಳು ಈ ರಸ್ತೆಯ ಬದಲಿಗೆ ಕೆ.ನಿಡುಗಣೆ-ಹೆಬ್ಬೆಟ್ಟಗೇರಿ-ದೇವಸ್ಥೂರು-ಕಾಲೂರು ಸಂಪರ್ಕ ರಸ್ತೆ ಉಪಯೋಗಿಸಬಹುದಾಗಿದೆ.
ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೆÇಲೀಸ್ ಅದಿsೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಮಡಿಕೇರಿ ಇವರು ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.