ಮಡಿಕೇರಿ, ಸೆ. 4: ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿಯು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ ಆರ್‍ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಮಧ್ಯವರ್ತಿಗಳ ಹಾವಳಿ ತಡೆಗಟ್ಟುವಂತೆ ಕೋರಿದೆ. ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಯಲ್ಲಿ ಕಳೆದ ಬಾರಿ ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ಅರ್ಹ ಬೆಳೆಗಾರರನ್ನು ಗುರುತಿಸಿ ಸೂಕ್ತ ಪರಿಹಾರ ಒದಗಿಸಬೇಕು. ಕೊಡವರ ಕೋವಿ ಹಕ್ಕನ್ನು ಯಥಾಸ್ಥಿತಿ ಮುಂದುವರೆಸಲು ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದೆ. ವೀರಾಜಪೇಟೆ ತಹಶೀಲ್ದಾರ್ ಕಚೇರಿಯಲ್ಲಿಯು ಭ್ರಷ್ಟಾಚಾರ ತಡೆಗಟ್ಟುವಂತೆ ತಹಶೀಲ್ದಾರ್‍ಗೆ ಮನವಿ ಮಾಡಿವೆ. ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ 2008ನೇ ಇಸವಿಯಲ್ಲಿ ಯುಪಿಎ ಸರಕಾರ ಘೋಷಿಸಿದ್ದ ವಿದರ್ಭ ಪ್ಯಾಕೇಜ್ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕ್ರಮವಹಿಸುವಂತೆ ಕೋರಿದೆ.

ಮನವಿ ಸಲ್ಲಿಕೆ ಸಂದರ್ಭ ಸಮಿತಿಯ ಅಧ್ಯಕ್ಷ ಕಟ್ಟಿಮಂದಯ್ಯ, ಕಾರ್ಯಾಧ್ಯಕ್ಷ ಬಿ.ಎಸ್. ಕಾರ್ಯಪ್ಪ, ಖಜಾಂಚಿ ಸುಬ್ರಮಣಿ, ನಿರ್ದೇಶಕ ವಿಶ್ವನಾಥ್, ಹೋಬಳಿ ಅಧ್ಯಕ್ಷ ವಿಜಯ ನಂಜಪ್ಪ ಇದ್ದರು.