ಪೊನ್ನಂಪೇಟೆ, ಸೆ. 6: ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ತಾ. 11 ರಿಂದ 13 ರವರೆಗೆ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಲಿದೆ.