ಕೂಡಿಗೆ, ಸೆ. 6: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ (ಮುಂಗಾರು ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ)ದ ಪೂರ್ವಭಾವಿ ಸಭೆಯು ತೊರೆನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸೆಪ್ಟಂಬರ್ ಮೊದಲ ವಾರದಲ್ಲಿ ತೊರೆನೂರು ಗ್ರಾಮದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಜನಪರ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿವಿಧ ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಗ್ರಾಮದ ವಿವಿಧ ಸಂಘಟನೆಗಳು, ಸಹಕಾರ ಸಂಘ, ದೇವಾಲಯ ಸಮಿತಿ, ನೀರು ಬಳಕೆದಾರರ ಸಂಘಗಳ ಮುಖ್ಯಸ್ಥರನ್ನು ವಿವಿಧ ಸಮಿತಿಗಳಿಗೆ ಆಯ್ಕೆ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಈಗಾಗಲೇ ಹತ್ತು ಸಮಿತಿಗಳನ್ನು ರಚನೆ ಮಾಡ ಲಾಗಿದ್ದು, ಎಲ್ಲರ ಸಹಕಾರ ದೊಂದಿಗೆ ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ತಮ್ಮೆಲ್ಲರ ಸಹಕಾರ ಮುಖ್ಯ ಎಂದು ಕೋರಿದರು. ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ, ಜಿಲ್ಲಾ ನೇಕಾರರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರಂಗ, ತೊರೆನೂರು ದೇವಾಲಯ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ಗ್ರಾ.ಪಂ. ಸದಸ್ಯರಾದ ಮಹೇಶ್, ಈಶ್ವರಪ್ಪ, ಮಂಜುನಾಥ್, ತುಂಗರಾಜ್, ಶಂಕ್ರಯ್ಯ, ಗ್ರಾಮದ ಹಿರಿಯ ಪ್ರಮುಖರು ಸೇರಿದಂತೆ ಮತ್ತಿತರರು ಇದ್ದರು.