ಮಡಿಕೇರಿ, ಸೆ. 6: ನಾಪೋಕ್ಲು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಬೊಜ್ಜಂಗಡ ಅವನಿಜ ಸೋಮಯ್ಯ ಅವರು 2019ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಡಾ. ಅವನಿಜ ಅವರು ಪ್ರಶಸ್ತಿ ಸ್ವೀಕರಿಸಿದರು. 1995ರಲ್ಲಿ ಎಜುಕೇಶನಲ್ ಫಿಜಿಕಾಲಜಿ ವಿಷಯದಲ್ಲಿ ಪಿಹೆಚ್‍ಡಿ ಮಾಡಿರುವ ಇವರು ನಾಪೋಕ್ಲು ಕಾಲೇಜ್‍ನಲ್ಲಿ ಇಂಗ್ಲೀಷ್ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಪೋಕ್ಲು ಸ.ಪ.ಪೂ. ಕಾಲೇಜಿನಲ್ಲಿನ ಇವರ ಸೇವೆಯನ್ನು ಪರಿಗಣಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಬಗ್ಗೆ ಅವನಿಜ ಅವರು ‘ಶಕ್ತಿ’ಯೊಂದಿಗೆ ಹರ್ಷ ವ್ಯಕ್ತಪಡಿಸಿದರು. ಇವರು ಮೂಲತಃ ಶ್ರೀಮಂಗಲ ಕಾಯಮಾನಿಯವರಾದ ನಿವೃತ್ತ ಬ್ಯಾಂಕ್ ಸಿಬ್ಬಂದಿ ಬೊಜ್ಜಂಗಡ ಸೋಮಯ್ಯ ಅವರ ಪತ್ನಿ.