ಮಡಿಕೇರಿ, ಸೆ. 7: ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31 ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33 ಮೋಟಾರು ವಾಹನ ಕಾಯ್ದೆ 1998ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ, 1989ರ ತಿದ್ದುಪಡಿ ನಿಯಮಾವಳಿ 1990 ನಿಯಮ 221ಎ 5, ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ, ಸ್ಥಳೀಯ ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಠಿಯಿಂದ ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ ಮಲ್ಟಿ ಆಕ್ಸಿಲ್ ವಾಹನಗಳ ಸಂಚಾರ ನಿರ್ಬಂಧಕಾಜ್ಞೆಯನ್ನು ತಾ. 10 ರವರೆಗೆ ಮುಂದುವರೆಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.