ಸಂಪಾಜೆ, ಸೆ. 7: ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ ಮತ್ತು ಕೊಡಗು, ನೇತಾಜಿ ಗೆಳೆಯರ ಬಳಗ ಚಡಾವು ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚ ಭಾರತ ಸಪ್ತಾಹ 2019 ಅಂಗವಾಗಿ ಸರಕಾರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಗೃತಿ, ಬೀದಿ ನಾಟಕ, ಸಂಪಾಜೆ ಪ.ಪೂ. ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಉದ್ಘಾಟಿಸಿ, ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಸಂಚಾಲಕ ಎಂ. ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ, ಪರಿಸರದ ಸ್ವಚ್ಛತೆಯನ್ನು ಕಾಪಾಡಿ ತಮ್ಮ ಆರೋಗ್ಯವನ್ನು ರಕ್ಷಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಮಾಲತಿ ಸ್ವಾಗತಿಸಿ, ಕಾರ್ಯಕ್ರಮವನ್ನು ಸಂತೋಷ್ ಕುಮಾರ್ ನಿರೂಪಿಸಿದರು. ನೇತಾಜಿ ಗೆಳೆಯರ ಬಳಗದ ಸ್ಥಾಪಕಾಧ್ಯಕ್ಷ ಪಿ.ಎಲ್. ಸುರೇಶ್ ವಂದಿಸಿದರು.