ಮಡಿಕೇರಿ, ಸೆ. 7: 2018-19ನೇ ಸಾಲಿಗೆ ಜಿಲ್ಲೆಯಲ್ಲಿ ಆಯ್ಕೆಗೊಂಡ “ಉತ್ತಮ ಶಿಕ್ಷಕ ಪ್ರಶಸ್ತಿಗೆ” ಭಾಜನರಾದ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಸಲಾಗುವದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ” ಮಡಿಕೇರಿ ತಾಲೂಕು ಚೆಂಬು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ದೇಜಮ್ಮ, ಸೋಮವಾರಪೇಟೆ ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢ ಶಾಲೆಯ ಇಬ್ರಾಹಿಂ ಎಸ್.ಎಂ., ವೀರಾಜಪೇಟೆ ತಾಲೂಕಿನ ಬೆಕ್ಕೆಸೊಡ್ಲೂರು ಶಾರದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು ಆರ್. ಆಯ್ಕೆಗೊಂಡಿದ್ದಾರೆ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಟಿ.ಎಚ್. ಸುಕುಮಾರ್, ಸೋಮವಾರಪೇಟೆ ತಾಲೂಕಿನ ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಎಂ.ಎ. ಆನಂದ್, ವೀರಾಜಪೇಟೆ ತಾಲೂಕಿನ ಬೆಟ್ಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಜಿ. ಸೀತಾ, ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಹಳೆ ಚೆಂಬು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸೆಲೆಸ್ಟಿನ್ ಲೋಬೋ ಹಾಗೂ ಸೋಮವಾರಪೇಟೆ ತಾಲೂಕಿನ ದೊಡ್ಡ ಭಂಡಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕÀ ಬಿ.ಟಿ. ವಿಶ್ವನಾಥ್ ಆಯ್ಕೆಯಾಗಿದ್ದಾರೆ.