ವೀರಾಜಪೇಟೆ, ಸೆ.7: ವೀರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯದ ವತಿಯಿಂದ 2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಸಿಬಿಎಸ್‍ಇ, ಐಸಿಎಸ್‍ಇ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರುಗಳ ಮಕ್ಕಳಿಗೆ ತಾ.15ರಂದು ಸಂಘದ ಮಹಾಸಭೆಯಲ್ಲಿ ಬಹುಮಾನ ನೀಡಲಾಗುವದು. ಅರ್ಹ ವಿದ್ಯಾರ್ಥಿಗಳು ತಾ:10ರೊಳಗೆ ಸಂಘದ ವ್ಯವಸ್ಥಾಪಕರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಮೊ.7204742567 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.