ಸುಂಟಿಕೊಪ್ಪ, ಸೆ. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಒಕ್ಕೂಟ ಗದ್ದೆಹಳ್ಳ-ಕೆದಕಲ್ ಸ್ವಸಹಾಯ ಸಂಘಗಳÀ ಜೊತೆ ಸೇರಿ ಸದಸ್ಯರು ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯ ನಡೆಸಿದರು.

ವಿರೇಂದ್ರ ಹೆಗ್ಡೆಯವರ ಮಹಾತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಕಾರ್ಯಕ್ರಮದಡಿಯಲ್ಲಿ ಗದ್ದೆಹಳ್ಳ-ಕೆದಕಲ್ ಒಕ್ಕೂಟದ ಸದಸ್ಯರು ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿ ಜಮಾವಣೆಗೊಂಡು ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿ ಕಡಿದು, ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು.

ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ನಾಗರತ್ನ ಸುರೇಶ್, ದೇವಸ್ಥಾನ ಆಡಳಿತ ಸಮಿತಿ ಕಾರ್ಯದರ್ಶಿ ಸುರೇಶ್ ಗೋಪಿ, ಸೇವಾ ಪ್ರತಿನಿಧಿ ಜ್ಯೋತಿ ಲಕ್ಷ್ಮಿ, ಸ್ವಸಹಾಯ ಸಂಘದ ಸದಸ್ಯರು ಇದ್ದರು.