ಕೂಡಿಗೆ, ಸೆ. 7: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಇಂದು ನಡೆದು ಉಪಾಧ್ಯಕ್ಷರಾಗಿ ಪ್ರಮೀಳಾ ಆಯ್ಕೆಗೊಂಡಿದ್ದಾರೆ. ಹಾಲಿ ಉಪಾಧ್ಯಕ್ಷೆ ಪದ್ಮ ಅವರು ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ತಾಲೂಕು ದಂಡಾಧಿಕಾರಿ ಗೋವಿಂದ ರಾಜ್ ನೆರವೇರಿಸಿದರು. ಒಬ್ಬರೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಪ್ರಮೀಳಾ ನವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಸಂದÀರ್ಭದಲ್ಲಿ ಗ್ರಾಮ ಪಂಚಾಯಿತಿ 14 ಸದಸ್ಯರುಗಳಲ್ಲಿ 13 ಸದಸ್ಯರು ಹಾಜರಿದ್ದರು. ಒಬ್ಬರು ಗೈರಾಗಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ, ಅಭಿವೃದ್ಧಿ ಅಧಿಕಾರಿ ರಾಕೇಶ್ ಇದ್ದರು.