ಮಡಿಕೇರಿ, ಸೆ.8 : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ತಾ. 29 ರಿಂದ ಅಕ್ಟೋಬರ್, 7 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಮೈಸೂರು ಕಾಡಾ ಮೈದಾನದಲ್ಲಿ ಏರ್ಪಡಿಸಲಾಗುವದು.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ. 2 ಸಾವಿರಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ತಾ. 21 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್: ಞಚಿಟಿಟಿಚಿಜಚಿಠಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡಲಾಗುವದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ದೂ: 080-22484516, 22107704 ನ್ನು ಸಂಪರ್ಕಿಸಬಹುದು.