ಕೂಡಿಗೆ, ಸೆ. 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಶೇಷ ಘಟಕ ಯೋಜನೆಯಡಿ ಜನಪದ ಉತ್ಸವ ಮುಂಗಾರು ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವು ತಾ. 10 ರಂದು (ನಾಳೆ) ತೊರೆನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸಾಮೀಜಿ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ದೇವರಾಜು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ್ ಸಾಗರ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ದೇವಾಲಯ ಸಮಿತಿ ಸೇರಿದಂತೆ ಎಲ್ಲಾ ಮಹಿಳಾ ಘಟಕಗಳು ವಿವಿಧ ಸಂಘಟನೆ ಪ್ರಮುಖರು ಭಾಗಹಿಸಲಿದ್ದಾರೆ. ಜನಪದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿವಿಧ ಜನಪದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.