ಸೋಮವಾರಪೇಟೆ, ಸೆ. 8: ತಾಲೂಕಿನ ಸಿದ್ಧಲಿಂಗಪುರ-ಅರಶಿಣಗುಪ್ಪೆ ಗ್ರಾಮದಲ್ಲಿರುವ ಶ್ರೀಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಮಾಸಿಕ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ದೇವಾಲಯದ ಪ್ರಧಾನ ರಾಜೇಶ್ ನಾಥ್ ಗುರೂಜಿ ನೇತೃತ್ವದಲ್ಲಿ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ಹೋಮ, ವಿಶೇಷ ಪೂಜೆ, ಅಭಿಷೇಕಗಳು ನಡೆದವು. ನಂತರ ಶ್ರೀನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ, ತಂಬಿಲ ಸೇವೆ, ಮಹಾಮಂಗಳಾರತಿ ಸೇರಿದಂತೆ ಇತರ ಪೂಜಾ ವಿಧಿ ವಿಧಾನಗಳು ಅರ್ಚಕ ಜಗದೀಶ್ ಉಡುಪ, ವಾದಿರಾಜ್ ನೇತೃತ್ವದಲ್ಲಿ ನಡೆಯಿತು. ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ಜರುಗಿತು.