ಮಡಿಕೇರಿ, ಸೆ.8 : ಅಕ್ಟೋಬರ್ 13 ರಂದು ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದವರ ಶೈಕ್ಷಣಿಕ, ಆರ್ಥಿಕ ಪ್ರಗತಿಗಾಗಿ ದುಡಿದ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಸಕಾರಗೊಳಿಸುವಂತಹ ಯಾವದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿ ಸಾಧನೆ ಮಾಡಿ ದಾಖಲೆ ಹೊಂದಿರುವ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವ್ಯಕ್ತಿಗಳು ಹೆಚ್ಚಿನ ಮಾಹಿತಿಗೆ ಕೂಡಲೇ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಡಿಕೇರಿ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಅವರನ್ನು ಸಂಪರ್ಕಿಸಬಹುದು.