ಮಡಿಕೇರಿ, ಸೆ. 9: ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನ ಆವರಣದಲ್ಲಿ ತಾ.11 ರಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಆರ್. ನಟೇಶ್, ವೀರಾಜಪೇಟೆ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜ ಡಿ., ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿಂಧೆ ನಿಲೇಶ್ ಡಿಯೋಬ, ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ. ಕಾರ್ಯಪ್ಪ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಜೆ. ಗೋವರ್ಧನ್ ಸಿಂಗ್ ಇತರರು ಭಾಗವಹಿಸಲಿದ್ದಾರೆ.