ಸೋಮವಾರಪೇಟೆ, ಸೆ.9: ರೈತರ ಆರ್ಥಿಕ ಹಿತ ಕಾಪಾಡಿಕೊಂಡು ಬಂದಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ಗಳು ಈವರೆಗೆ ಉಳಿಸಿ ಕೊಂಡಿರುವ ರೂ.300 ಕೋಟಿ ಸುಸ್ತಿ ಬಡ್ಡಿ ಮನ್ನಾ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವದು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಶ್ರಯದಲ್ಲಿ 1.53 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರೈತಭವನ ಹಾಗೂ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರ ಇನ್ನಷ್ಟು ಬಲಗೊಳ್ಳಬೇಕಿದೆ. ಅ ನಿಟ್ಟಿನಲ್ಲಿ ವಾರ್ಷಿಕ 100 ಕೋಟಿಯಂತೆ ಸೋಮವಾರಪೇಟೆ, ಸೆ.9: ರೈತರ ಆರ್ಥಿಕ ಹಿತ ಕಾಪಾಡಿಕೊಂಡು ಬಂದಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ಗಳು ಈವರೆಗೆ ಉಳಿಸಿ ಕೊಂಡಿರುವ ರೂ.300 ಕೋಟಿ ಸುಸ್ತಿ ಬಡ್ಡಿ ಮನ್ನಾ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವದು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಶ್ರಯದಲ್ಲಿ 1.53 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರೈತಭವನ ಹಾಗೂ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರ ಇನ್ನಷ್ಟು ಬಲಗೊಳ್ಳಬೇಕಿದೆ. ಅ ನಿಟ್ಟಿನಲ್ಲಿ ವಾರ್ಷಿಕ 100 ಕೋಟಿಯಂತೆ ಸರ್ಕಾರ ಕೇವಲ 131 ಕೋಟಿ ಅನುದಾನವನ್ನು ಮಾತ್ರ ನೀಡಿದೆ. ಪ್ರಸಕ್ತ ವರ್ಷ 1500 ಕೋಟಿಯಷ್ಟು ನಷ್ಟವಾಗಿದ್ದು ರಾಜ್ಯ ಸರ್ಕಾರ ತಕ್ಷಣಕ್ಕೆ 536 ಕೋಟಿ ಅನುದಾನದ ಭರವಸೆ ನೀಡಿದ್ದು, ಈಗಾಗಲೇ 100 ಕೋಟಿ ಬಿಡುಗಡೆ ಮಾಡಲಾಗಿದೆ. ಮುಂದೆಯೂ ಅನುದಾನ ಲಭಿಸಲಿದೆ ಎಂದು ರಂಜನ್ ಹೇಳಿದರು.

(ಮೊದಲ ಪುಟದಿಂದ) ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಕೆ.ಷಡಕ್ಷರಿ ಮಾತನಾಡಿ, ರೈತರು ಕಷ್ಟದಲ್ಲಿದ್ದಾಗ ಸಹಕಾರ ಸಂಘಗಳೇ ಅವರನ್ನು ಮೇಲೆತ್ತುವ ಕೆಲಸ ಮಾಡಿದೆ. ಕೃಷಿ ಚಟುವಟಿಕೆಗಳಿಗೆ ಹೆಚ್ಚು ಸಾಲ ನೀಡಿದರೆ ಮಾತ್ರ ರೈತರ ಆರ್ಥಿಕ ಸುಧಾರಣೆಯೊಂದಿಗೆ ಬ್ಯಾಂಕ್ ಬೆಳವಣಿಗೆಯೂ ಸಾಧ್ಯ ಎಂದರು.

ಸಹಕಾರ ಕ್ಷೇತ್ರ ರಾಜಕೀಯ ರಹಿತವಾಗಿರಬೇಕು. ಶಾಖೆಗಳು ವಾರ್ಷಿಕ 10 ಕೋಟಿ ಸಾಲ ನೀಡುವ ಗುರಿ ಹೊಂದಬೇಕು. ಕೃಷಿ ಸಾಲದೊಂದಿಗೆ ಇತರ ಸಾಲಗಳನ್ನೂ ಒದಗಿಸಬೇಕು. ಸಹಕಾರ ಕ್ಷೇತ್ರ ಸುಧಾರಣೆಯಾದರೆ ರೈತರ ಆರ್ಥಿಕ ಸ್ಥಿತಿಯೂ ಸುಧಾರಣೆಯಾಗುತ್ತದೆ ಎಂದು ಅಭಿಪ್ರಾಯಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ, ಕೇಂದ್ರ ಸರಕಾರದ ಜಿಎಸ್‍ಟಿ ಮತ್ತು ನೋಟು ಅಮಾನ್ಯೀಕರಣದಿಂದಾಗಿ ದೇಶದ ಎಲ್ಲಾ ಕ್ಷೇತ್ರಗಳ ಬೆಳವಣಿಗೆ ಕುಂಠಿತಗೊಂಡಿದೆ. ರೈತರ ಆರ್ಥಿಕ ಅಭಿವೃದ್ಧಿ ಸುಧಾರಿಸಬೇಕಾದರೆ ಸಹಕಾರ ಸಂಘಗಳ ಪಾತ್ರ ಮಹತ್ತರವಾದುದು. ಅತೀವೃಷ್ಟಿ-ಅನಾವೃಷ್ಟಿಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಶಕ್ತಿ ತುಂಬಬೇಕಾದ ಅನಿವಾರ್ಯತೆ ಒದಗಿದೆ ಎಂದರು.

ರಾಜ್ಯ ಸರಕಾರಿ ಅಭಿಯೋಜಕ ಎಚ್.ಎಸ್. ಚಂದ್ರಮೌಳಿ ಮಾತನಾಡಿ ಸಹಕಾರಿ ಕ್ಷೇತ್ರ ಬಡ ರೈತರ ಕಷ್ಟಗಳನ್ನು ಪರಿಹರಿಸುವ ಕೇಂದ್ರವಾಗಿದೆ ಎಂದು ಅಭಿಪ್ರಾಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಟಿ.ಆರ್. ಪುರುಷೋತ್ತಮ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಸ್ಕಾರ್ಡ್ ಬ್ಯಾಂಕ್‍ನ ಜಿಲ್ಲಾ ನಿರ್ದೇಶಕ ಎಚ್.ಟಿ. ಮಂಜುನಾಥ್, ಕಾಸ್ಕಾರ್ಡ್ ಬ್ಯಾಂಕ್‍ನ ಜಿಲ್ಲಾ ವ್ಯವಸ್ಥಾಪಕರಾದ ವಸಂತ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಪಿಎಲ್‍ಡಿ ಬ್ಯಾಂಕ್ ಉಪಾಧ್ಯಕ್ಷೆ ಬಿ.ಜಿ. ಪೂವಮ್ಮ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳು, ವ್ಯವಸ್ಥಾಪಕ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.