ಕೂಡಿಗೆ, ಸೆ.9: ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯು ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಾಗಿ ಎರಡು ಭಾಗದಲ್ಲಿ ತುಂಡಾಗಿ, ಅದರ ಮೆಟ್ಟಿಲುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ತಕ್ಷಣದಲ್ಲಿ ಸರಿಪಡಿಸುವ. ಭರವಸೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೀಡಿದ್ದಾರೆ. ಕುಶಾಲನಗರ - ಕೂಡಿಗೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಸಂದರ್ಭ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಪ್ರಮುಖ ಸಂಪರ್ಕ ಸೇತುವೆಯಾಗಿ ರುವದರಿಂದ. 10 ದಿನಗಳ ಒಳಗೆ ಸರಿಪಡಿಸಲಾಗುವದು ಎಂದು ತಿಳಿಸಿದ್ದಾರೆ. ಸೇತುವೆ ಕೊಡಗು- ಮೈಸೂರು, ಸಂರ್ಪಕ ಸೇತುವೆ, ಅಲ್ಲದೆ ನೂರಾರು, ಕಾರ್ಮಿಕರು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದಾರೆ. ಅವರುಗಳಿಗೆ ತೊಂದರೆಯಾಗದಂತೆ ತಕ್ಷಣ ದುರಸ್ತಿ ಕಾರ್ಯಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಆರ್. ಮಂಜುಳ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ತಾಲೂಕು ಪಂಚಾಯತ್ ಇಂಜಿನಿಯರ್ ವೀರೇಂದ್ರಕುಮಾರ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.