ವೀರಾಜಪೇಟೆ, ಸೆ. 11: ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇದೆ ತಾ. 12ರ ರಾತ್ರಿ ನಡೆಯಲಿರುವ ಗಣೇಶ ವಿಸರ್ಜನೋತ್ಸವಕ್ಕೆ ಪ.ಪಂ. ಎಲ್ಲಾ ರೀತಿಯ ಸುರಕ್ಷತಾ ಕ್ರಮಕೈಗೊಂಡಿದ್ದು ಸಕಲ ಸಿದ್ಧತೆ ನಡೆಸಿರುವದಾಗಿ ಪ.ಪಂ. ಮುಖ್ಯಾಧಿಕಾರಿ ಶ್ರೀಧರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಣೇಶನ ಮೂರ್ತಿಗಳು ಮೆರವಣಿಗೆಯಲ್ಲಿ ಸಾಗಿಬರುವ ಹಾದಿಯಲ್ಲಿ ಎಲ್ಲಾ ರಸ್ತೆ ಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿದೆ. ಬೀದಿ ದೀಪಗಳನ್ನು ಹಾಗೂ ಹೈಮಾಸ್ಟ್ ದೀಪಗಳನ್ನು ದುರಸ್ತಿಪಡಿಸಲಾಗಿದೆ. ಪಟ್ಟಣದ ಎಲ್ಲಾ 18 ವಾರ್ಡ್‍ನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗಾಗಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಮೂರ್ತಿ ವಿಸರ್ಜಿಸುವ ಗೌರಿಕೆರೆಯನ್ನು ದೀಪಾಲಂಕಾರಗೊಳಿಸಲಾಗುತ್ತಿದೆ. ಗಣೇಶನ ವಿಸರ್ಜನೆ ಸಂದರ್ಭ ನುರಿತ ಈಜುಗಾರರನ್ನು ನಿಯೋಜಿಸಲಾಗಿದ್ದು, ತೆಪ್ಪಗಳ ಮೂಲಕ ವಿಸರ್ಜನಾ ಕಾರ್ಯ ನಡೆಸಲು ಕ್ರಮವಹಿಸಲಾಗಿದೆ. ಪೊಲೀಸ್ ಇಲಾಖೆ ಸಹಕಾರದಲ್ಲಿ ಆಗತ್ಯ ಕಡೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಈ ಹಿಂದೆ ಪ.ಪಂ.ನಿಂದ ನೀಡಲಾಗುತ್ತಿದ್ದ ಎಲ್ಲಾ ನೆರವನ್ನು ಗಣಪತಿ ಸಮಿತಿಗಳಿಗೆ ಈ ಬಾರಿಯೂ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.