ಸೋಮವಾರಪೇಟೆ, ಸೆ. 10: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಇಲ್ಲಿನ ಜ್ಞಾನವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಬೇಳೂರು ರಸ್ತೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಮೈಮ್ ಮೂಲಕ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ನಾಟಕ ಪ್ರಸ್ತುತಪಡಿಸಿದ ಶಾಲೆಯ ವಿದ್ಯಾರ್ಥಿಗಳಾದ ಸಿಂಚನ, ಸುಪ್ರಿತ, ಜೀವಿತ, ಸನಿಶಾ, ಪ್ರತೀಕ್ಷಾ, ಅಕ್ಷಿತ, ಕವನ, ಮೇಘಶ್ರೀ ಅವರುಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕಿ ವಿದ್ಯಾವತಿ ಅವರು ಮಕ್ಕಳನ್ನು ತರಬೇತುಗೊಳಿಸಿದ್ದಾರೆ.